ಚುನಾವಣಾ ಆಕ್ರಮ : 20 ಕೋಟಿ ನಗದು, 5 ಕೋಟಿ ಚಿನ್ನ ವಶ – Police News
728 x 90

ಚುನಾವಣಾ ಆಕ್ರಮ : 20 ಕೋಟಿ ನಗದು, 5 ಕೋಟಿ ಚಿನ್ನ ವಶ

ಚುನಾವಣಾ ಆಕ್ರಮ : 20 ಕೋಟಿ ನಗದು, 5 ಕೋಟಿ ಚಿನ್ನ ವಶ

ಬೆಂಗಳೂರು, ಮೇ 1-ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈವರೆಗೆ 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.  ಏ.30ರವರೆಗೆ ಬೆಂಗಳೂರು, ಮೈಸೂರು, ದಾವಣಗೆರೆ, ಖಾನಾಪುರ, ಹುಬ್ಬಳ್ಳಿ ಮೊದಲಾದ ಸ್ಥಳಗಳಲ್ಲಿ ಆಯೋಗ ಮತ್ತು ಐಟಿ ಅಧಿಕಾರಿಗಳು ನಡೆಸಿದ ಪ್ರತ್ಯೇಕ

ಬೆಂಗಳೂರು, ಮೇ 1-ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ ಚುನಾವಣಾ ಆಯೋಗ ಮತ್ತು ಆದಾಯ ತೆರಿಗೆ ಅಧಿಕಾರಿಗಳು ರಾಜ್ಯದ ವಿವಿಧೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈವರೆಗೆ 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.  ಏ.30ರವರೆಗೆ ಬೆಂಗಳೂರು, ಮೈಸೂರು, ದಾವಣಗೆರೆ, ಖಾನಾಪುರ, ಹುಬ್ಬಳ್ಳಿ ಮೊದಲಾದ ಸ್ಥಳಗಳಲ್ಲಿ ಆಯೋಗ ಮತ್ತು ಐಟಿ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಒಟ್ಟು 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಭಾರತ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪವನ್ ದಿವಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಮೈಸೂರಿನಲ್ಲಿ ನಾಲ್ವರು ಸರ್ಕಾರಿ ಗುತ್ತಿಗೆದಾರರಿಂದ 6.76 ಕೋಟಿ ರೂ.ಗಳ ಅಘೋಷಿತ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಗುತ್ತಿಗೆದಾರರು ಈ ಭಾರೀ ಮೊತ್ತದ ಹಣಕ್ಕೆ ದಾಖಲೆಗಳನ್ನು ಹಾಜರುಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.  ಅದೇ ರೀತಿ ದಾವಣಗೆರೆ, ಖಾನಾಪುರ ಮತ್ತು ಹುಬ್ಬಳ್ಳಿಯ ಕೆಲವೆಡೆ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ದಾಖಲೆ ಇಲ್ಲದ ಮತ್ತು ಅಘೋಷಿತ ನಗದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

1 comment
Bhanu343431
ADMINISTRATOR
PROFILE

Posts Carousel

Leave a Comment

Your email address will not be published. Required fields are marked with *

Cancel reply

1 Comment

  • Custom Writing Services
    September 12, 2019, 11:20 am

    Our diligent Custom Dissertation Help writers understand that students operate within a strained budget and are therefore devoted to working under minimum pay which makes our services more affordable to students. Our graduate College Essay Services are well priced at irresistible rates.

    REPLY

Latest Posts

Top Authors

Most Commented

Featured Videos

Translate »